ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್-2 ಲೋಕಾರ್ಪಣೆ ಮಾಡಿದರು.
ಬೆಂಗಳೂರಿನ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಸಜ್ಜಿತವಾಗಿರುವ ಟರ್ಮಿನಲ್-2 ಸಿದ್ಧವಾಗಿದ್ದು, ಇದು ಏಷ್ಯಾ ಖಂಡದ ಮೊದಲ ಗಾರ್ಡನ್ ಟರ್ಮಿನಲ್- 2 ಆಗಿದೆ.
2.25 ಲಕ್ಷ ಚದರ ಮೀಟರ್ ವಿಸ್ತಿರ್ಣದಲ್ಲಿರುವ ಟರ್ಮಿನಲ್ ನಿರ್ಮಾಣಕ್ಕಾಗಿ 13,000 ಕೋಟಿ ವೆಚ್ಚ ಮಾಡಲಾಗಿದೆ. ವಾರ್ಷಿಕವಾಗಿ 2.5 ಕೋಟಿ ಪ್ರಯಾಣಿಕರ ನಿರ್ವಹಣೆಯ ಸಾಮರ್ಥ್ಯ ಈ ಟರ್ಮಿನಲ್ ಗಿದೆ.
ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆ ಮಾಡಿದರು.