alex Certify ಹಿಮಾಚಲ ಪ್ರದೇಶದಲ್ಲಿದೆ 52 ಮತದಾರರನ್ನು ಹೊಂದಿರುವ ವಿಶ್ವದ ಅತಿ ಎತ್ತರದ ಮತಗಟ್ಟೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಮಾಚಲ ಪ್ರದೇಶದಲ್ಲಿದೆ 52 ಮತದಾರರನ್ನು ಹೊಂದಿರುವ ವಿಶ್ವದ ಅತಿ ಎತ್ತರದ ಮತಗಟ್ಟೆ…!

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಅದೊಂದು ಮತಗಟ್ಟೆ ವಿಶ್ವಮಟ್ಟದಲ್ಲೇ ಹೆಸರು ಗಳಿಸಿದೆ.

ಲಾಹೌಲ್ ಮತ್ತು ಸ್ಪಿಟಿಯ ತಾಶಿಗಂಗ್‌ನಲ್ಲಿ ಒಂದು ಮತಗಟ್ಟೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಮುದ್ರ ಮಟ್ಟದಿಂದ 15,256 ಅಡಿ ಎತ್ತರದಲ್ಲಿರುವ ತಾಶಿಗ್ಯಾಂಗ್‌ನಲ್ಲಿರುವ ಮತದಾನ ಕೇಂದ್ರವು ವಿಶ್ವದ ಅತಿ ಎತ್ತರದ ಮತಗಟ್ಟೆಯಾಗಿದೆ.

ಇಲ್ಲಿ 52 ಮತದಾರರು ತಮ್ಮ ಹಕ್ಕು ಚಲಾಯಿಸುತ್ತಾರೆ. ಇಲ್ಲಿ ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರಿಗೆ ಸುಲಭವಾಗಿ ಮತದಾನ ಮಾಡಲು ಚುನಾವಣಾ ಆಯೋಗ ಮಾದರಿ ಮತದಾನ ಕೇಂದ್ರವನ್ನಾಗಿ ಮಾಡಲಾಗಿದೆ.

ಹಿಮಾಚಲ ಪ್ರದೇಶದಾದ್ಯಂತ 55 ಲಕ್ಷಕ್ಕೂ ಹೆಚ್ಚು ಮತದಾರರು ಹೊಸ ರಾಜ್ಯ ಸರ್ಕಾರವನ್ನು ಆಯ್ಕೆ ಮಾಡಲು ಶನಿವಾರ ಮತ ಚಲಾಯಿಸಲಿದ್ದಾರೆ. ಚುನಾವಣಾ ಆಯೋಗವು ದೂರದ ಪ್ರದೇಶಗಳಲ್ಲಿ ಮೂರು ಸಹಾಯಕ ಮತದಾನ ಕೇಂದ್ರಗಳು ಸೇರಿದಂತೆ 7,884 ಮತಗಟ್ಟೆಗಳನ್ನು ಸ್ಥಾಪಿಸಿದೆ.

ಮುಖ್ಯಮಂತ್ರಿ ಜೈರಾಮ್ ಠಾಕೂರ್, ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಸೇರಿದಂತೆ 412 ಅಭ್ಯರ್ಥಿಗಳು ರಾಜ್ಯದ 68 ಕ್ಷೇತ್ರಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಆಡಳಿತಾರೂಢ ಬಿಜೆಪಿ ತನ್ನ ಅಭಿವೃದ್ಧಿ ಅಜೆಂಡಾದ ಹಿನ್ನೆಲೆಯಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಡಿಸೆಂಬರ್ 8 ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...