alex Certify ವೈಮಾನಿಕ ಪ್ರದರ್ಶನದಲ್ಲಿ ಮಿಲಿಟರಿ ವಿಮಾನಗಳು ಪರಸ್ಪರ ಡಿಕ್ಕಿ: ಪೈಲಟ್ ಸೇರಿ 6 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈಮಾನಿಕ ಪ್ರದರ್ಶನದಲ್ಲಿ ಮಿಲಿಟರಿ ವಿಮಾನಗಳು ಪರಸ್ಪರ ಡಿಕ್ಕಿ: ಪೈಲಟ್ ಸೇರಿ 6 ಜನ ಸಾವು

ಎರಡನೇ ವಿಶ್ವಯುದ್ಧ ಕಾಲದ ಎರಡು ವಿಮಾನಗಳು ಪರಸ್ಪರ ಡಿಕ್ಕಿಯಾದ ಘಟನೆ ಅಮೆರಿಕದ ಟೆಕ್ಸಾಸ್ ನಗರದ ಬಳಿ ನಡೆದಿದೆ. ಪೈಲಟ್ ಸೇರಿದಂತೆ ಆರು ಸಿಬ್ಬಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಮಾನಗಳ ವೈಮಾಲಿಕ ಪ್ರದರ್ಶನದ ವೇಳೆ ಅಪಘಾತ ಸಂಭವಿಸಿದೆ.

ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ಪ್ರಕಾರ. ಡಲ್ಲಾಸ್ ವೈಮಾನಿಕ ಪ್ರದರ್ಶನದಲ್ಲಿ ವಿಂಟೇಜ್ ಮಿಲಿಟರಿ ವಿಮಾನಗಳು ಗಾಳಿಯಲ್ಲಿ ಡಿಕ್ಕಿ ಹೊಡೆದವು. ಬೋಯಿಂಗ್ ಬಿ-17 ಫ್ಲೈಯಿಂಗ್ ಫೋರ್ಟ್ರೆಸ್ ಮತ್ತು ಬೆಲ್ ಪಿ-63 ಕಿಂಗ್‌ ಕೋಬ್ರಾ ವಿಂಗ್ಸ್ ಓವರ್ ಡಲ್ಲಾಸ್ ವೈಮಾನಿಕ ಪ್ರದರ್ಶನದಲ್ಲಿ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿವೆ.

ಡಲ್ಲಾಸ್ ಎಕ್ಸಿಕ್ಯೂಟಿವ್ ಏರ್‌ ಪೋರ್ಟ್‌ ನಲ್ಲಿ ನಡೆದ ಘಟನೆಗೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ, 6 ಸಿಬ್ಬಂದಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಡಲ್ಲಾಸ್ ಮೇಯರ್ ಎರಿಕ್ ಜಾನ್ಸನ್ ಪ್ರಕಾರ, ಅಪಘಾತದಲ್ಲಿ ಸಾವುನೋವುಗಳ ಸಂಖ್ಯೆಯನ್ನು ಇನ್ನೂ ದೃಢಪಡಿಸಲಾಗಿಲ್ಲ.

ಘರ್ಷಣೆಯ ನಂತರ ಸ್ಥಳದಲ್ಲಿ 40 ಕ್ಕೂ ಹೆಚ್ಚು ಅಗ್ನಿಶಾಮಕ ರಕ್ಷಣಾ ಘಟಕಗಳು ಇದ್ದವು ಎಂದು ಡಲ್ಲಾಸ್ ಫೈರ್-ರೆಸ್ಕ್ಯೂ ಜೇಸನ್ ಇವಾನ್ಸ್ ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...