ಹುಬ್ಬಳ್ಳಿ: ಟೈಯರ್ ಸ್ಫೋಟಗೊಂಡ ಪರಿಣಾಮ ಪ್ರಯಾಣಿಕರ ಬಸ್ ವೊಂದು ನಡುರಸ್ತೆಯಲ್ಲಿಯೇ ಧಗಧಗನೇ ಹೊತ್ತಿ ಉರಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ.
ಮುಂಬೈನಿಂದ ಮಂಗಳೂರಿಗೆ ಹೊರಟಿದ್ದ ರೇಷ್ಮಾ ಟ್ರಾವೆಲ್ಸ್ ಗೆ ಸೇರಿದ ಸುಖವಿಹಾರಿ ಬಸ್ ಹುಬ್ಬಳ್ಳಿ ಬೈಪಾಸ್ ರಸ್ತೆಗೆ ಬರುತ್ತಿದ್ದಂತೆಯೇ ಟೈಯರ್ ಸ್ಫೋಟಗೊಂಡಿದ್ದು, ಇದ್ದಕ್ಕಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ. ಬಸ್ ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.
ಬಸ್ ನ ಹಿಂಬದಿ ಟೈಯರ್ ಸ್ಫೋಟಗೊಂಡಿದ್ದು, ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.