ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರ ಫಿಕ್ಸ್ ಆಗಿದ್ದು, ಕೋಲಾರದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ಇಂದು ವಿಶೇಷ ಬಸ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರಕ್ಕೆ ತೆರಳಿದ್ದು, ಕೋಲಾರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಿದ ಸಿದ್ದರಾಮಯ್ಯ, ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ.
ನಾಮಪತ್ರ ಸಲ್ಲಿಸಲು ಮತ್ತೆ ಕೋಲಾರಕ್ಕೆ ಬರುತ್ತೇನೆ ಎಂದು ಹೇಳುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವ ತೀರ್ಮಾನವನ್ನು ಪ್ರಕಟಿಸಿದ್ದಾರೆ.