alex Certify BIG NEWS: ಕಲ್ಲು ಕ್ವಾರಿ ಕುಸಿತ; ಎಂಟು ಮಂದಿ ಕಾರ್ಮಿಕರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲ್ಲು ಕ್ವಾರಿ ಕುಸಿತ; ಎಂಟು ಮಂದಿ ಕಾರ್ಮಿಕರ ದುರ್ಮರಣ

ಮಿಜೋರಾಂನಲ್ಲಿ ಸೋಮವಾರ ಕಲ್ಲು ಕ್ವಾರಿಯೊಂದು ಕುಸಿದು ಬಿದ್ದ ದುರ್ಘಟನೆಯಲ್ಲಿ ಬಿಹಾರದ ಎಂಟು ಕಾರ್ಮಿಕರ ಮೃತದೇಹಗಳು ಮಂಗಳವಾರ ಪತ್ತೆಯಾಗಿವೆ. ಇನ್ನೂ ನಾಲ್ವರು ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಮತ್ತು ಕಾಣೆಯಾದವರೆಲ್ಲರೂ ಪತ್ತೆಯಾಗುವವರೆಗೂ ಕಾರ್ಯಾಚರಣೆ ಮುಂದುವರೆಯುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಸೋಮವಾರ ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದು ಬಿದ್ದ ಪರಿಣಾಮ ಬಿಹಾರದ 12 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ.

ಮೂಲಗಳ ಪ್ರಕಾರ ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್‌ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ತಮ್ಮ ಊಟದ ವಿರಾಮದಿಂದ ಮರಳಿ ಕಲ್ಲು ಕ್ವಾರಿ ಒಳಗೆ ಪ್ರವೇಶಿಸಿದ್ದರು.

12 ಕಾರ್ಮಿಕರು, ಐದು ಹಿಟಾಚಿ ಯಂತ್ರಗಳು ಮತ್ತು ಇತರ ಡ್ರಿಲ್ಲಿಂಗ್ ಯಂತ್ರಗಳು ಕ್ವಾರಿಯ ಅಡಿಯಲ್ಲಿ ಹೂತುಹೋಗಿದ್ದವು ಎಂದು ಮೂಲಗಳು ವರದಿ ಮಾಡಿವೆ.

ಲೀಟ್ ಗ್ರಾಮ ಮತ್ತು ಹ್ನಾಹಿಯಾಲ್ ಪಟ್ಟಣದ ಸ್ವಯಂಸೇವಕರು ತಕ್ಷಣ ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿದರು.

ಎನ್ ಡಿ ಆರ್ ಎಫ್, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ.

ದುರ್ಘಟನೆ ನಡೆದ ಕ್ವಾರಿ ಎರಡೂವರೆ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...