alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 24 ಗಂಟೆಯಲ್ಲಿ ಅತಿ ಕಡಿಮೆ ಪ್ರಕರಣಗಳು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 24 ಗಂಟೆಯಲ್ಲಿ ಅತಿ ಕಡಿಮೆ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ತಗ್ಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 474 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದು 2020ರ ಏಪ್ರಿಲ್ 6ರ ಬಳಿಕ ದೇಶದಲ್ಲಿ ದಾಖಲಾದ ಅತಿ ಕಡಿಮೆ ಸಂಖ್ಯೆಯ ಕೋವಿಡ್ ಪ್ರಕರಣಗಳಾಗಿವೆ

ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಕೋವಿಡ್ ಗೆ ಓರ್ವರು ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 5,30,533 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,918 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,27,724 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,13,909 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,81,36,068 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,40,417 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...