ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ ನೀಡಿದ್ದಾರೆ. ಒಮರ್ ಅಬ್ದುಲ್ಲಾ ಅವರು ಪಕ್ಷದ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ
ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷರಾಗಿದ್ದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ರಾಜೀನಾಮೆ ನೀಡಿದ್ದು, ಅವರ ಪುತ್ರನಾಗಿರುವ ಒಮರ್ ಅಬ್ದುಲ್ಲಾ ಪಕ್ಷದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಗಳಾಗಿಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಅವರು ಕಾರ್ಯನಿರ್ವಹಿಸಿದ್ದಾರೆ. ಈಗ ತಂದೆಯಿಂದ ತೆರವಾದ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಒಮರ್ ವಹಿಸಿಕೊಳ್ಳಲಿದ್ದಾರೆ. ನ್ಯಾಷನಲ್ ಕಾಣ್ಫರೆನ್ಸ್ ಪಕ್ಷದ ಚುಕ್ಕಾಣಿ ಹಿಡಿಯಲು ಒಮರ್ ಅಬ್ದುಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.