ಬೆಳಗಾವಿ: ತಾಯಿ ಹಾಗೂ ಇಬ್ಬರು ಪುಟಾಣಿ ಮಕ್ಕಳ ಶವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಪತ್ತೆಯಾಗಿದೆ.
ತನುಜಾ ಪರಸಪ್ಪಗೋಡಿ (32), ಸುದೀಪ್ (4) ಹಾಗೂ ರಾಧಿಕಾ (3) ಮೃತರು. ಚುಂಚನೂರು ನಿವಾಸಿ ತನುಜಾ ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.