
ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಸಹೋದರ ಕೆಂಪೇಗೌಡನನ್ನು ಬಂಧಿಸಲಾಗಿದೆ.
ವೋಟರ್ ಐಡಿ ಪ್ರಕರಣದ ಪ್ರಮುಖ ಆರೋಪಿ ಕೆಂಪೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ವೋಟರ್ ಐಡಿ ಪರಿಷ್ಕರಣಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದ ಕೆಂಪೇಗೌಡನನ್ನು ಬಂಧಿಸಲಾಗಿದೆ. ತುಮಕೂರಿನ ಸಮೀಪ ಪೊಲೀಸರು ಕಾರ್ಯಾಚರಣೆ ನಡೆಸಿ ಕೆಂಪೇಗೌಡನನ್ನು ಬಂಧಿಸಿದ್ದಾರೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಬಂಧನಕ್ಕೆ ತೀವ್ರ ಹುಡುಕಾಟ ನಡೆಸಲಾಗಿದೆ ಎಂದು ಹೇಳಲಾಗಿದೆ.