ಚಿಕ್ಕಬಳ್ಳಾಪುರ: ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 40 ಅಧಿಕ ಪ್ರಯಾಣಿಕರಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಹಿಂದೂಪುರ, ತಿರುಪತಿ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ನಲ್ಲಿ 40 ಅಧಿಕ ಪ್ರಯಾಣಿಕರು ಇದ್ದರು. ನಿಯಂತ್ರಣ ತಪ್ಪಿದ ಬಸ್ ಕಾಲುವೆಗೆ ಉರುಳಿ ಬಿದ್ದು, ಪ್ರಯಾಣಿಕರು ಗಾಯಗೊಂಡಿದ್ದು, ಆರು ಮಂದಿ ಸ್ಥಿತಿ ಗಂಭೀರವಾಗಿದೆ.
10ಕ್ಕೂ ಅಧಿಕ ಆಂಬುಲೆನ್ಸ್ ಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದೆ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಶಾಸಕ ಎಂ. ಕೃಷ್ಣಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.