alex Certify BIG NEWS: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಂಕಿತನ ಆರೋಗ್ಯ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಂಕಿತನ ಆರೋಗ್ಯ ಸ್ಥಿತಿ ಗಂಭೀರ

ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಆಟೋ ಸ್ಫೋಟ ಪ್ರಕರಣದಲ್ಲಿ ಚಾಲಕ ಹಾಗೂ ಶಂಕಿತ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಶಂಕಿತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸುಟ್ಟ ಗಾಯಗಳಾಗಿರುವುದರಿಂದ ಇನ್ ಫೆಕ್ಷನ್ ಸಾಧ್ಯತೆ ಹಿನ್ನೆಲೆಯಲ್ಲಿ ವೈದ್ಯರು ಯಾರನ್ನೂ ಭೇಟಿಯಾಗಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಶಂಕಿತನ ವಿಚಾರಣೆ ಸಾಧ್ಯವಾಗಿಲ್ಲ. ಉಳಿದಂತೆ ತನಿಖೆ ಚುರುಕುಗೊಂಡಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...