ಬೇಗ ಏಳು- ಬೇಗ ಮಲಗು ಪದ್ಧತಿ ಈಗಿಲ್ಲ. ರಾತ್ರಿ 12ರ ಮೇಲೆ ನಿದ್ರೆ ಮಾಡುವವರ ಸಂಖ್ಯೆಯೇ ಹೆಚ್ಚು. ಇದ್ರಿಂದಾಗಿ ಬೆಳಿಗ್ಗೆ ಏಳುವುದು ತಡವಾಗುತ್ತದೆ. ಸೂರ್ಯೋದಯಕ್ಕಿಂತ ಮೊದಲು ಸ್ನಾನ ಮಾಡುವವರ ಸಂಖ್ಯೆ ಅತೀ ಕಡಿಮೆ. ಸೂರ್ಯ ನೆತ್ತಿ ಮೇಲೆ ಬಂದ್ರೂ ಕೆಲವರಿಗೆ ಸ್ನಾನವಾಗಿರುವುದಿಲ್ಲ. ನೀವು ಇಂತವರಲ್ಲಿ ಒಬ್ಬರಾಗಿದ್ದರೆ ಎಚ್ಚರ.
ನೀವು ಸ್ನಾನ ಮಾಡುವ ಸಮಯ ನಿಮ್ಮ ಸುಖ, ಸಂತೋಷ, ಆರ್ಥಿಕ ವ್ಯವಸ್ಥೆ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಧರ್ಮಶಾಸ್ತ್ರದಲ್ಲಿ ನಾಲ್ಕು ರೀತಿಯ ಸ್ನಾನವನ್ನು ಹೇಳಲಾಗಿದೆ.
ಬೆಳಗಿನ ಜಾವ 4 ಗಂಟೆಯಿಂದ ಐದು ಗಂಟೆಯೊಳಗೆ ಮಾಡುವ ಸ್ನಾನವನ್ನು ಮುನಿ ಸ್ನಾನವೆಂದು ಕರೆಯಲಾಗುತ್ತದೆ. ಇದು ಸ್ನಾನ ಮಾಡಲು ಅತ್ಯುತ್ತಮವಾದ ಸಮಯ. ಮುನಿ ಸ್ನಾನ ಮಾಡುವುದರಿಂದ ಮನೆಯಲ್ಲಿ ಸುಖ-ಶಾಂತಿ, ಸಮೃದ್ಧಿ ನೆಲೆಸುತ್ತದೆಂದು ನಂಬಲಾಗಿದೆ.
ಬೆಳಿಗ್ಗೆ ಐದು ಗಂಟೆಯಿಂದ ಆರು ಗಂಟೆಯೊಳಗೆ ಸ್ನಾನ ಮಾಡಿದ್ರೆ ಆಯಸ್ಸು, ಕೀರ್ತಿ, ಧನ, ಸಂತೋಷ ಲಭಿಸುತ್ತದೆ. ಇದನ್ನು ದೇವಿ ಸ್ನಾನವೆಂದು ಕರೆಯಲಾಗುತ್ತದೆ. ಶಾಸ್ತ್ರಗಳ ಪ್ರಕಾರ ಈ ಸ್ನಾನ ಕೂಡ ಉತ್ತಮವಾದದ್ದು.
ಮೂರನೇ ಸ್ನಾನವನ್ನು ಮನುಷ್ಯ ಸ್ನಾನವೆಂದು ಕರೆಯಲಾಗುತ್ತದೆ. ಬೆಳಿಗ್ಗೆ 6 ಗಂಟೆಯಿಂದ 8 ಗಂಟೆಯೊಳಗೆ ಮಾಡುವ ಸ್ನಾನ ಇದಾಗಿದೆ. ಈ ಸಮಯದಲ್ಲಿ ಸ್ನಾನ ಮಾಡಿದ್ರೆ ಕೆಲಸದಲ್ಲಿ ಯಶಸ್ಸು ಸಿಗುತ್ತದೆ ಎಂದು ನಂಬಲಾಗಿದೆ.
ಕೊನೆಯ ಸ್ನಾನ ರಾಕ್ಷಸಿ ಸ್ನಾನ. ಇದೀಗ ಸಾಮಾನ್ಯವಾಗಿದೆ. 8 ಗಂಟೆ ನಂತ್ರ ಮಾಡುವ ಸ್ನಾನ ಈ ಶ್ರೇಣಿಯಲ್ಲಿ ಬರುತ್ತದೆ. ಇದನ್ನು ಧರ್ಮ ನಿಷೇಧವೆಂದು ಪರಿಗಣಿಸಲಾಗಿದೆ. ಈ ಸ್ನಾನ ಮಾಡುವುದರಿಂದ ಮನೆಯಲ್ಲಿ ಬಡತನ, ಕಲಹ, ಅಶಾಂತಿ, ಅನಾರೋಗ್ಯ ಕಾಡುತ್ತದೆ.