ಭಾನುವಾರದಂದು ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿಯವರ ಮೇಲೆ ಕೆಲವರು ಹಲ್ಲೆ ನಡೆಸಿ ಅಂಗಿ ಹರಿದಿರುವ ಘಟನೆ ನಡೆದಿದ್ದು, ಉದ್ದೇಶಪೂರ್ವಕವಾಗಿ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಶಾಸಕರು ಆರೋಪಿಸಿದ್ದಾರೆ.
ಘಟನೆಯ ವಿವರ: ಭಾನುವಾರದಂದು ಮೂಡಿಗೆರೆ ತಾಲೂಕಿನ ಎಸ್ಟೇಟ್ ಕುಂದೂರಿನ ತೋಟದಲ್ಲಿ ಕಾಡಾನೆ ದಾಳಿಯಿಂದ ಶೋಭಾ ಎಂಬವರು ಮೃತಪಟ್ಟಿದ್ದರು. ವಿಷಯ ತಿಳಿದು ಶಾಸಕ ಕುಮಾರಸ್ವಾಮಿಯವರು ಸ್ಥಳಕ್ಕೆ ತೆರಳಿದ ವೇಳೆ ಹಲ್ಲೆ ನಡೆಸಲಾಗಿದೆ.
ಶೋಭಾ ಅವರ ಸಾವಿನಿಂದ ಆಕ್ರೋಶಗೊಂಡಿದ್ದ ಸ್ಥಳೀಯರು ಶಾಸಕರು ಬಂದಾಗ ಅವರಿಗೆ ಘೇರಾವ್ ಹಾಕಿದ್ದು, ಈ ವೇಳೆ ಪೊಲೀಸರು ಅಲ್ಲಿಂದ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆಗ ಆಕ್ರೋಶಿತರ ಗುಂಪು ಜೀಪಿನ ಮೇಲೆ ಕಲ್ಲು ತೂರಾಟ ನಡೆಸಿ ಶಾಸಕರಿಗೆ ಹಲ್ಲೆ ನಡೆಸಿದ್ದಾರೆ.