alex Certify BIG NEWS: ಬಿಎಂಟಿಸಿ ಬಸ್ ಗೆ ಮತ್ತೋರ್ವ ವಿದ್ಯಾರ್ಥಿನಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಎಂಟಿಸಿ ಬಸ್ ಗೆ ಮತ್ತೋರ್ವ ವಿದ್ಯಾರ್ಥಿನಿ ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ್ದಾಳೆ.

ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕಿ ಲಾವ್ಯಾಶ್ರೀ ಬಲಿಯಾಗಿದ್ದಾಳೆ. ಬೆಂಗಳೂರಿನ ಟಿ.ಸಿ.ಪಾಳ್ಯದಿಂದ ಬಟ್ಟರಹಳ್ಳಿಗೆ ಹೋಗುವ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ.

ಪ್ರಿಯದರ್ಶಿನಿ ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಶಾಲೆಯಿಂದ ಬೈಕ್ ನಲ್ಲಿ ಕರೆತರುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಕುಳಿತಿದ್ದ ಮಗಳು ಲಾವ್ಯಾಶ್ರೀ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಬಸ್ ಲಾವ್ಯಾಶ್ರೀ ಮೇಲೆಯೇ ಹರಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಲಾವ್ಯಾಶ್ರೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

ಪ್ರಿಯದರ್ಶಿನಿ ಹಾಗೂ ಆಕೆಯ ಮಗ ಯಾಶ್ವಿನ್ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ ಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...