alex Certify SHOCKING NEWS: ಪುಟ್ಟ ಕಂದನ ಮುಖಕ್ಕೆ ಕಚ್ಚಿದ ಹುಚ್ಚುನಾಯಿ; 32 ಹೊಲಿಗೆ ಹಾಕಿದ ವೈದ್ಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪುಟ್ಟ ಕಂದನ ಮುಖಕ್ಕೆ ಕಚ್ಚಿದ ಹುಚ್ಚುನಾಯಿ; 32 ಹೊಲಿಗೆ ಹಾಕಿದ ವೈದ್ಯರು

ಬೀದರ್: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚುತ್ತಿದ್ದು, ಮಕ್ಕಳು ಬಲಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬೀದಿ ನಾಯಿ ದಾಳಿಗೆ ಬಾಲಕನೊಬ್ಬ ಬಲಿಯಾದ ಘಟನೆ ಮಾಸುವ ಮುನ್ನವೇ ಇದೀಗ ಅಂಥದ್ದೇ ಮತ್ತೊಂದು ಘಟನೆ ನಡೆದಿದೆ.

ಹುಚ್ಚುನಾಯಿಯೊಂದು 2 ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ್ದು, ಮುಖವನ್ನೇ ಕಚ್ಚಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಗಾಡವಾನ್ ಗಲ್ಲಿಯಲ್ಲಿ ನಡೆದಿದೆ.

2 ವರ್ಷದ ಅಸ್ಮಾ ಸಮೀರ್ ಶೇಖ್ ಗಂಭೀರವಾಗಿ ಗಾಯಗೊಂಡಿದ್ದು, ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಮಗುವಿಗೆ 32 ಹೊಲಿಗೆ ಹಾಕಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...