ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದು, ಬುಧವಾರದಂದು ಕೋಲಾರ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು.
ಕುಮಾರಸ್ವಾಮಿಯವರು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಾಲೆ ಒಂದಕ್ಕೆ ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ಕಾರಿನಲ್ಲಿ ಕೂರುವ ವೇಳೆ ಅವರು ಆಡಿದ ಮಾತೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿತ್ತು.
ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದು ಹೆಚ್.ಡಿ.ಕೆ. ಹೇಳಿದ್ದಾರೆ.
ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದು ಹೆಚ್.ಡಿ.ಕೆ. ಹೇಳಿದ್ದಾರೆ.
.