alex Certify ಡಿಸೆಂಬರ್ 11ರಂದು ಬೆಂಗಳೂರು ಹುಡುಗಿ ಜೊತೆ ಅಂಬಿ ಪುತ್ರನ ‘ನಿಶ್ಚಿತಾರ್ಥ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸೆಂಬರ್ 11ರಂದು ಬೆಂಗಳೂರು ಹುಡುಗಿ ಜೊತೆ ಅಂಬಿ ಪುತ್ರನ ‘ನಿಶ್ಚಿತಾರ್ಥ’

ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಶೀಘ್ರದಲ್ಲೇ ವೈವಾಹಿಕ ಬದುಕಿಗೆ ಕಾಲಿಡಲಿದ್ದು, ಡಿಸೆಂಬರ್ 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ವಿವಾಹ ನಿಶ್ಚಿತಾರ್ಥ ನಡೆಯಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಮೂಲದ ಹುಡುಗಿ ಜೊತೆ ಅಭಿಷೇಕ್ ವಿವಾಹ ನಿಶ್ಚಿತಾರ್ಥವಾಗಲಿದ್ದು, ಇದು ಅರೆಂಜ್ ಮ್ಯಾರೇಜ್ ಎಂದು ಹೇಳಲಾಗುತ್ತಿದೆ. ಈಗಾಗಲೇ ಉಭಯ ಕುಟುಂಬಗಳು ಮಾತುಕತೆ ನಡೆಸಿದ್ದು ನಿಶ್ಚಿತಾರ್ಥಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಅಭಿಷೇಕ್ ಕೈ ಹಿಡಿಯುತ್ತಿರುವ ಹುಡುಗಿ ಯಾರು ಎಂಬುದರ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಅರಮನೆ ಮೈದಾನದಲ್ಲಿ ನಡೆಯುವ ನಿಶ್ಚಿತಾರ್ಥ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರುಗಳು ಭಾಗವಹಿಸುವ ನಿರೀಕ್ಷೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...