ಬೆಂಗಳೂರು: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ತೆರಳಿದ್ದ ರಾಜ್ಯದ ಭಕ್ತರ ಬಸ್ ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 23 ಭಕ್ತರು ಗಾಯಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಕಣ್ಣೂರಿನ ಪೊನ್ನೂರು ಬಳಿ ರಾಜ್ಯದ ಭಕ್ತರ ಮಿನಿ ಬಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 23 ಅಯ್ಯಪ್ಪಸ್ವಾಮಿ ಭಕ್ತರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಗಾಯಾಳು ಭಕ್ತರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ತಾಲೂಕಿನ ಪೇಟೆಕುರುಬರಹಳ್ಳಿ ಮೂಲದ ಭಕ್ತರು ಶಬರಿಮಲೆ ಯಾತ್ರೆಗೆ ತೆರಳಿದ್ದರು. ದೇವರ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಮಿನಿ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.