alex Certify 150 ಸ್ಥಾನಗಳೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಕಾಂಗ್ರೆಸ್ ಧೂಳೀಪಟ: ಅಡ್ರೆಸ್ ಇಲ್ಲದಂತಾಗ್ತಾರೆ ಸಿದ್ಧರಾಮಯ್ಯ: ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

150 ಸ್ಥಾನಗಳೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಕಾಂಗ್ರೆಸ್ ಧೂಳೀಪಟ: ಅಡ್ರೆಸ್ ಇಲ್ಲದಂತಾಗ್ತಾರೆ ಸಿದ್ಧರಾಮಯ್ಯ: ಯಡಿಯೂರಪ್ಪ

ಶಿವಮೊಗ್ಗ: ವಿಧಾನಸಭಾ ಚುನಾವಣೆ ಕೇವಲ ಐದಾರು ತಿಂಗಳು ಮಾತ್ರ ಇದೆ. ಬರುವ ಚುನಾವಣೆಯಲ್ಲಿ ನಾವು 150 ಸ್ಥಾನ ಪಡೆದು ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಧೂಳೀಪಟ ಆಗಲಿದೆ. ಅದಕ್ಕೆ ಬೇಕಾದ ಪರಿಶ್ರಮ ಹಾಕಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಗರದ ಕಿಮ್ಮನೆ ಗಾಲ್ಫ್ ರೆಸಾರ್ಟ್ ನಲ್ಲಿ ಆಯೋಜಿಸಲಾಗಿರುವ ಬಿಜೆಪಿ ಪ್ರಶಿಕ್ಷಣ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಕಡೆ ಗಮನ ಕೊಟ್ಟಾಗ ಮಾತ್ರ ಗುರಿ ಮುಟ್ಟಲು ಸಾಧ್ಯ. ಚುನಾವಣಾ ದೃಷ್ಟಿಯಿಂದ ಹಾಗೂ ಸಂಘಟನೆ ದೃಷ್ಟಿಯಿಂದ ತಯಾರಿ ನಡೆಸಬೇಕು. ವಾಸ್ತವಿಕವಾಗಿ ನಮ್ಮ ಸ್ಥಿತಿ‌ ಏನಿದೆ. ಬೇರೆ ಪಕ್ಷಗಳ ಸ್ಥಿತಿ ಏನಿದೆ ಎಂಬ ಬಗ್ಗೆ ಗಮನ ಹರಿಸಬೇಕು ಎಂದರು.

ಪ್ರಧಾನಮಂತ್ರಿಗಳು, ಗೃಹ ಸಚಿವರು, ರಾಷ್ಟ್ರೀಯ ಅಧ್ಯಕ್ಷರು ಹೆಚ್ಚು ಬಾರಿ ರಾಜ್ಯಕ್ಕೆ ಬರಲಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ಉಳಿಸಿಕೊಳ್ಳಬೇಕಿದೆ. ವಿಶೇಷ ಗಮನ ಕೊಟ್ಟಾಗ ಮಾತ್ರ ಗುರಿ ತಲುಪಲು ಸಾಧ್ಯ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳು ಬೆನ್ನೆಲುಬು ಆಗಿವೆ. ಕೃಷಿ ಯಂತ್ರದಲ್ಲಿ ಸಬ್ಸಿಡಿ ನೀಡಲಾಗುತ್ತಿದೆ ಎಂದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರಲ್ಲಿ ನಾಯಕತ್ವ ಇಲ್ಲದೇ ಗೊಂದಲದಲ್ಲಿದ್ದಾರೆ. ಈಗಾಗಲೇ ತಾನು ಮುಖ್ಯಮಂತ್ರಿ, ತಾನು ಮುಖ್ಯಮಂತ್ರಿ ಅಂತಾ ಹಲವರು ತಿರುಕನ‌ ಕನಸು ಕಾಣ್ತಿದ್ದಾರೆ. ಸಿದ್ದರಾಮಯ್ಯ ಅಡ್ರೆಸ್ ಇಲ್ಲದಂತಾಗುತ್ತಾರೆ. 140-150 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ತರುವ ದಿಕ್ಕಿನಲ್ಲಿ ಸಂಕಲ್ಪ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...