alex Certify ಚುನಾವಣಾ ಸಮರಕ್ಕೆ ಸಿದ್ದರಾಗಿ: ಬಿಜೆಪಿ ಕಾರ್ಯಕರ್ತರಿಗೆ ಸಿಎಂ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾ ಸಮರಕ್ಕೆ ಸಿದ್ದರಾಗಿ: ಬಿಜೆಪಿ ಕಾರ್ಯಕರ್ತರಿಗೆ ಸಿಎಂ ಕರೆ

ಶಿವಮೊಗ್ಗ: ಪಾರ್ಟಿ ವಿತ್ ಡಿಫರನ್ಸ್ ಬಿಜೆಪಿ. ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಾರ್ಟಿ ಬಿಜೆಪಿ. ಸಿದ್ದಾಂತ, ಮೌಲ್ಯಗಳಿಗೆ ಬಿಜೆಪಿ ಕಾಂಪ್ರಮೈಸ್ ಆಗುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಪ್ರಶಿಕ್ಷಣ ವರ್ಗದಲ್ಲಿ ಮಾತನಾಡಿದ ಅವರು, ಮೊದಲು ದೇಶ, ನಂತರ ಪಾರ್ಟಿ ಎಂಬ ಧ್ಯೇಯ ಹೊಂದಿರುವ ಪಕ್ಷ ಬಿಜೆಪಿ.  ಬಿಜೆಪಿ ಬಗ್ಗೆ ಅಪಪ್ರಚಾರ ದೊಡ್ಡದಿದೆ. ಆದರೆ ಜನರಿಗೆ ಬಿಜೆಪಿ ಬಗ್ಗೆ ಉತ್ತಮ ಅಭಿಪ್ರಾಯವಿದೆ ಎಂದರು.

ಸಂವಿಧಾನದ ಆಶಯ ಈಡೇರಿಸುವುದು ಬಿಜೆಪಿ ಆದ್ಯತೆ. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಹೇಗೆ ನಡೆದುಕೊಂಡಿತ್ತು ಎಂಬುದು ಈಗ ಇತಿಹಾಸ. ಮುಂಬೈನ ಬಾರ್ ಅಸೋಸಿಯೇಷನ್ ನಲ್ಲಿ ಅವರಿಗೆ ಕಾಂಗ್ರೆಸ್ ನವರು ಅವಕಾಶವೇ ನೀಡಿರಲಿಲ್ಲ. ಈಗ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಟೀಕಿಸಿದರು.

ಅವರಿಗೆ ಅಧಿಕಾರವೇ ಮುಖ್ಯವಾಗಿತ್ತು. ಕಾಂಗ್ರೆಸ್ ತನ್ನ ಸಿದ್ದಾಂತ, ನೀತಿಗೆ ಅಂಟಿಕೊಂಡು ರಾಜಕಾರಣ ಮಾಡಿಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಅನೇಕ ಜನಪರ ಕೆಲಸ ಮಾಡಿದೆ. ನರೇಂದ್ರ ಮೋದಿ ಸರ್ಕಾರ ಕೂಡ ಉಜ್ವಲ ಯೋಜನೆ ಜಾರಿ ತಂದಿದೆ. ಪ್ರತಿ ಮನೆಗೆ ಶುದ್ಧ‌ ನೀರು ಪೂರೈಸಲಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿ ಮೋದಿ ಸರ್ಕಾರ ಅಭಿವೃದ್ಧಿ ಮಾಡಿದೆ ಎಂದರು.

ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಆರ್ಥಿಕ ಹಿಂಜರಿತ ಇದೆ. ಆದರೆ ಭಾರತ ಜಿಡಿಪಿಯಲ್ಲಿ ನಿಯಂತ್ರಣ ಹೊಂದಿದೆ. ಶೇ. 7 ಬೆಳವಣಿಗೆ ಕಾಣುತ್ತಿದೆ. ಆರ್ಥಿಕವಾಗಿ ಭಾರತ ಪ್ರಗತಿ ಸಾಧಿಸುತ್ತಿದೆ. ಮೋದಿ ಸರ್ಕಾರದ ದಾರಿಯಲ್ಲಿ ರಾಜ್ಯ ಸರ್ಕಾರ ಸಾಗುತ್ತಿದೆ. ಕೋವಿಡ್ ನಿರ್ವಹಣೆಯಲ್ಲಿ ಯಶಸ್ವಿಯಾಗಿದ್ದೇವೆ. ಯಡಿಯೂರಪ್ಪ ಅವರು ಮಾದರಿ ನಿರ್ವಹಣೆ ಮಾಡಿ ತೋರಿಸಿದ್ದಾರೆ ಎಂದರು.

ಸಿಎಂ ಆಗಿದ್ದಾಗ ತೆರಿಗೆ ನಿರ್ವಹಣೆಯಲ್ಲಿ ಹಿನ್ನಡೆಯಿತ್ತು. ಈಗ ಗುರಿ ಮೀರಿ ತೆರಿಗೆ ಸಂಗ್ರಹಣೆಯಾಗಿದೆ. ಬೃಹತ್ ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಸಂವಿಧಾನ ನಂಬಿಕೆ ಇಲ್ಲ ಎನ್ನುತ್ತಿದ್ದ ಪಕ್ಷಕ್ಕೆ ಆತ್ಮಾವಲೋಕನ ಮಾಡುವ ಅವಶ್ಯಕತೆ ಇದೆ. ಕಾಂಗ್ರೆಸ್ ನವರು ಇದು ಸಾಧ್ಯವಿಲ್ಲ, ಅದು ಸಾಧ್ಯ ಇಲ್ಲ ಎಂದು ಹೇಳುತ್ತಾರೆ. ಕಾಂಗ್ರೆಸ್ ನವರು ದಾಸ್ಯ ಸಂಸ್ಕೃತಿಯವರು. ತಾವೂ ಮಾಡುವುದಿಲ್ಲ, ಬೇರೆಯವರಿಗೂ ಮಾಡಲು ಬಿಡುವುದಿಲ್ಲ. ಶಿಕ್ಷಣ ಪಡೆಯುವುದು ಕಾಂಗ್ರೆಸ್ ಗೆ ಇಷ್ಟ ಇಲ್ಲ. ಅವರಿಗೆ ಉಳಿದವರು ದಾಸ್ಯದಲ್ಲೇ ಇರಬೇಕು ಎನ್ನುವ ಮನಸ್ಥಿತಿ ಕಾಂಗ್ರೆಸ್ ನವರದು ಎಂದರು.

ಜಿಲ್ಲಾ ಮಟ್ಟದಲ್ಲಿ ಇನ್ನು ಮುಂದೆ ಚುನಾವಣಾ ಸಮರಕ್ಕೆ ಸಿದ್ದರಾಗಿ. ಎಲ್ಲರೂ ಸೇರಿ‌ ಒಟ್ಟಾಗಿ ಕೆಲಸ ಮಾಡೋಣ. ಮುಂದಿನ ಬಾರಿಯೂ ನಮ್ಮ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡೋಣ ಎಂದು ಕರೆ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...