alex Certify ನಿವೇಶನ ರಹಿತರಿಗೆ ಸಿಹಿ ಸುದ್ದಿ: ಉಚಿತವಾಗಿ 32 ಸಾವಿರ ಸೈಟ್ ಹಂಚಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೇಶನ ರಹಿತರಿಗೆ ಸಿಹಿ ಸುದ್ದಿ: ಉಚಿತವಾಗಿ 32 ಸಾವಿರ ಸೈಟ್ ಹಂಚಿಕೆ

 ಚಿಕ್ಕಬಳ್ಳಾಪುರ: ಸರ್ಕಾರಿ ಜಮೀನು, ಗೋಮಾಳದಲ್ಲಿ ಯಾರೇ ಮನೆ ಕಟ್ಟಿದ್ದರೂ ಅವರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜರಬಂಡಹಳ್ಳಿಯಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಡಿಸೆಂಬರ್ ನಲ್ಲಿ 10,000 ಬಡವರಿಗೆ ಸರ್ಕಾರದಿಂದ ಉಚಿತವಾಗಿ ನಿವೇಶನ ವಿತರಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿವೇಶನ ವಿತರಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಟ್ಟು 826 ಎಕರೆ ಪ್ರದೇಶದಲ್ಲಿ 22 ಸಾವಿರ ಮಂದಿಗೆ ಉಚಿತವಾಗಿ ನಿವೇಶನ ವಿತರಿಸಲು ಸಂಪುಟದಲ್ಲಿ ಅನುಮೋದನೆ ದೊರಕಿಸಿಕೊಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...