ಬೆಂಗಳೂರು: ಎಸ್ ಸಿ , ಎಸ್ ಟಿ ಮೀಸಲಾತಿ ಹೆಚ್ಚಳ ಮಾಡಿದ ಬೆನ್ನಲ್ಲೇ ವಿವಿಧ ಸಮುದಾಯಗಳು ತಮಗೂ ಮೀಸಲಾತಿ ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದು, ಇದೀಗ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದಾರೆ.
ರಾಜ್ಯದಲ್ಲಿ ಒಕ್ಕಲಿಗರ ಸಮುದಾಯದ ಜನಸಂಖ್ಯಾ ಪ್ರಮಾಣ ಶೇ.19ರಿಂದ ಶೇ.20ರಷ್ಟಿದ್ದು ಈ ಸಮುದಾಯಕ್ಕೆ ಕೇವಲ ಶೇ.4ರಷ್ಟು ಮಾತ್ರ ಮೀಸಲಾತಿ ಇದೆ. ಇದನ್ನು ಶೇ.15ಕ್ಕೆ ಏರಿಕೆ ಮಾಡಬೇಕು ಎಂದು ಒಕ್ಕಲಿಗ ಸಮುದಾಯಗಳ ಸಭೆಯಲ್ಲಿ ಒತ್ತಾಯಿಸಲಾಗಿಯಿತು.
ಒಕ್ಕಲಿಗ ಸಮುದಾಯದ ಸಭೆಯಲ್ಲಿ ಮಾತನಾಡಿದ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಒಕ್ಕಿಲಿಗ ಸಮುದಾಯದ ಮೀಸಲಾತಿ ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಈ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ಇದೇ ವೇಳೆ ಮಾತನಾಡಿದ ನಂಜಾವಧೂತ ಸ್ವಾಮೀಜಿ, ಒಕ್ಕಲಿಗ ಸಮುದಾಯಕ್ಕೆ ಶೇ.15ರಷ್ಟು ಮೀಸಲಾತಿ ಹೆಚ್ಚಳ ಮಾಡಬೇಕು. ನಗರಪ್ರದೇಶ, ಆರ್ಥಿಕ ಹಿಂದುಳಿದ ವರ್ಗಗಳ ಅಡಿ ನಮಗೂ ಮೀಸಲಾತಿ ಕೊಡಬೇಕು. ನಮ್ಮ ಸಹನೆಯನ್ನು ದೌರ್ಬಲ್ಯ ಎಂದು ತಿಳಿಯುವುದು ಬೇಡ. ಜನವರಿ 23ರೊಳಗೆ ಮೀಸಲಾತಿ ಹೆಚ್ಚಳ ಮಾಡಬೇಕು. ಇಲ್ಲವಾದಲ್ಲಿ ಹೋರಾಟ ಆರಂಭಿಸುವುದಾಗಿ ಸರ್ಕಾರಕ್ಕೆ ಗಡುವು ನೀಡಿದರು.