ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಅಭಿವೃದ್ಧಿಗೆ ಸರ್ಕಾರ ಯಾವತ್ತೂ ಹಿಂದೇಟು ಹಾಕಿಲ್ಲ. ಇಡೀ ತೀರ್ಥಹಳ್ಳಿ ತಾಲೂಕಿನ ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ನೀಡಲು ನಾನು ಬದ್ಧನಾಗಿದ್ದೇನೆ. 60 ವರ್ಷದ ಸಂತ್ರಸ್ತರ ಸಮಸ್ಯೆಗೆ ಡಿಸೆಂಬರ್ ಒಳಗೆ ಪರಿಹಾರ ನೀಡಲಾಗುತ್ತದೆ ಎಂದು ಘೋಷಿಸಿದರು.
ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಕಾಂಗ್ರೆಸ್ ಸರ್ಕಾರ ಬಗೆಹರಿಸಿಲ್ಲ. ಸಂತ್ರಸ್ತರ ಬಗ್ಗೆ ಅವರಿಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂಬುದು ಗೊತ್ತಾಗಿದೆ. ಇದನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುವುದನ್ನು ಖಂಡಿಸುತ್ತೇವೆ. ಶರಾವತಿ ಸಂತ್ರಸ್ತರ ನೆರವಿಗೆ ನಾವು ಧಾವಿಸುತ್ತೇವೆ ಎಂದು ಹೇಳಿದರು.