ಬೆಂಗಳೂರು: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ 29ರಂದು ದೆಹಲಿಗೆ ತೆರಳಿ ಮುಕುಲ್ ರೊಹ್ಟಗಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗಡಿ ವಿವಾದದ ಬಗ್ಗೆ ಇದುವರೆಗಿನ ಬೆಳವಣಿಗೆ ಕುರಿತಾಗಿ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಸುಪ್ರೀಂಕೋರ್ಟ್ ನಲ್ಲಿ ಯಾವ ರೀತಿ ವಾದ ಮಾಡಬೇಕೆಂದು ಚರ್ಚೆ ನಡೆಸಲಾಗಿದೆ. ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚಿಸಿದ ನಂತರ ನಿರ್ಧಾರ ಕೈಗೊಳ್ಳಲಾಗುವುದು. ನೆಲ, ಜಲ, ಭಾಷೆ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.