ಇಂದೋರ್: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದ ಇಂದೋರ್ ತಲುಪಿದ್ದು, 5ನೇ ದಿನದ ಪಾದಯಾತ್ರೆ ನಡೆಯುತ್ತಿದೆ. ಈ ವೇಳೆ ನೂಕು-ನುಗ್ಗಲು ಉಂಟಾಗಿ ಅವಘಡ ಸಂಭವಿಸಿದೆ.
ಭಾರತ್ ಜೋಡೋ ಪಾದಯಾತ್ರೆ ವೇಳೆ ಕಾಲ್ತುಳತವುಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.
ಕೆ.ಸಿ. ವೇಣುಗೋಪಾಲ್ ಅವರ ಮೊಣಕಾಲು, ಕೈಗಳಿಗೆ ಗಾಯಗಳಾಗಿದ್ದು, ಭಾರತ್ ಜೋಡೋ ಯಾತ್ರೆ ಶಿಬಿರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.
ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಜನರು ಮುನ್ನುಗ್ಗಿದ್ದಾರೆ. ಈ ವೇಳೆ ನೂಕಾಟ-ತಳ್ಳಾಟ ನಡೆದಿದ್ದು, ಕಾಲ್ತುಳಿತ ಸಂಭವಿಸಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.