
ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಮುರುಘಾ ಸ್ವಾಮೀಜಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂಪಾಯಿ ಆಮಿಷ ನೀಡಲಾಗಿತ್ತು ಎಂದು ಹೇಳಿಕೆ ನೀಡಿದ ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಎಂ.ಎಲ್. ಪರಶುರಾಮ್ ಅವರಿಗೆ ಚಿತ್ರದುರ್ಗ ಪೊಲೀಸರು ನೋಟಿಸ್ ನೀಡಿದ್ದಾರೆ.
ಮುರುಘಾ ಸ್ವಾಮೀಜಿ ಪ್ರಕರಣದಿಂದ ಹಿಂದೆ ಸರಿಯಲು ಆಮಿಷ ಒಡ್ಡಿರುವುದಕ್ಕೆ ಪೂರಕವಾದ ಸಾಕ್ಷ್ಯಗಳೊಂದಿಗೆ ನವೆಂಬರ್ 29ರಂದು ವಿಚಾರಣೆಗೆ ಹಾಜರಾಗಲು ಪರಶುರಾಮ್ ಅವರಿಗೆ ಡಿವೈಎಸ್ಪಿ ಲೋಕೇಶ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.