ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
ಡ್ರಾಪ್ ಕೊಡುವ ನೆಪದಲ್ಲಿ ನವೆಂಬರ್ 25ರಂದು ಯುವತಿ ಮೇಲೆ ರ್ಯಾಪಿಡೋ ಬೈಕ್ ಸವಾರ, ಆತನ ಸ್ನೇಹಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಆಗ್ನೇಯ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಮಾಹಿತಿ ನೀದಿರುವ ಬೆಂಗಳೂರು ಪೊಲೀಸ್ ಕಮಿಷ್ನರ್, 22 ವರ್ಷದ ಯುವತಿ ನವೆಂಬರ್ 25ರಂದು ಮಧ್ಯರಾತ್ರಿ ತನ್ನ ಸ್ನೇಹಿತರ ಮನೆಯಿಂದ ಬೇರೆ ಮನೆಗೆ ಹೋಗಲು ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಯುವತಿಯನ್ನು ಕರೆದೊಯ್ದ ರ್ಯಾಪಿಡೋ ಬೈಕ್ ಸವಾರ, ಆಕೆಯ ಸ್ಥಿತಿಯನ್ನು ಕಂಡು ತನ್ನ ರೂಮಿಗೆ ಕರೆದೊಯ್ದಿದ್ದಾನೆ. ಬಳಿಕ ತನ್ನ ಸ್ನೇಹಿತನನ್ನೂ ಅಲ್ಲಿಗೆ ಕರೆದು ಯುವತಿ ಮೇಲೆ ಇಬ್ಬರೂ ಗ್ಯಾಂಗ್ ರೇಪ್ ನಡೆಸಿದ್ದಾರೆ.
ಬೆಳಿಗ್ಗೆ ಯುವತಿ ಎಚ್ಚರವಾಗಿ ನೋಡಿದಾಗ ತನ್ನ ಪರಿಸ್ಥಿತಿ ಗಮನಿಸಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಂಡಿದ್ದಾಳೆ. ಈ ವೇಳೆ ತನ್ನ ಮೇಲೆ ಅತ್ಯಾಚಾರವಾಗಿರುವುದು ದೃಢಪಟ್ಟಿದೆ. ಕೂಡಲೆ ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಇದೀಗ ಮೂವರು ಆರೊಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.
ರ್ಯಾಪಿಡೋ ಬೈಕ್ ಸವಾರ, ಆತನ ಸ್ನೇಹಿತ ಹಾಗೂ ಓರ್ವ ಮಹಿಳೆಯನ್ನು ಬಂಧಿಸಲಾಗಿದ್ದು, ಬಂಧಿತರಲ್ಲಿ ಓರ್ವ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆ. ಮತ್ತೋರ್ವ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದರು.