ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ವತಿಯಿಂದ 2022-23 ನೇ ಸಾಲಿನಲ್ಲಿ ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್ನ ಆನ್ಲೈನ್ನಲ್ಲಿ (https://sevasindhu.karnataka.gov.in) ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಹಾಗೂ ಕಚೇರಿ ದೂ.ಸಂ.08272–225528, ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.