alex Certify BIG BREAKING: 15 ಸಾವಿರ ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 15 ಸಾವಿರ ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಬೆಂಗಳೂರು: ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ.

ನವೆಂಬರ್ 18 ರ ತಾತ್ಕಾಲಿಕ ಆಯ್ಕೆ ಪಟ್ಟಿ ನಂತರದ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಮೀಸಲಾತಿಗೆ ಸಂಬಂಧಿಸಿದಂತೆ ಹಲವು ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿತ್ತು. ಒಬಿಸಿ ಮೀಸಲಾತಿಯಲ್ಲಿ ಪರಿಗಣಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ನ. 18 ರಂದು ಸರ್ಕಾರಿ ಶಾಲೆಗಳ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆಕ್ಷೇಪಣೆ ಆಹ್ವಾನಿಸಿ ಬಳಿಕ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...