ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹೊಸ ಪಡಿತರ ಚೀಟಿ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ವಾರ್ಷಿಕ ಹಿರಿತನದ ಆಧಾರದ ಮೇಲೆ ಇವುಗಳನ್ನು ವಿಲೇವಾರಿ ಮಾಡಬೇಕು ಎಂದು ತಿಳಿಸಲಾಗಿದೆ.
ಅರ್ಹ ಕುಟುಂಬಗಳಿಗೆ ಆದ್ಯತಾ ಪಡಿತರ ಚೀಟಿ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದ್ದು, ಸುಮಾರು 1.55 ಲಕ್ಷ ಕುಟುಂಬಗಳಿಗೆ ಹೊಸ ಪಡಿತರ ಚೀಟಿ ಸಿಗಲಿದೆ ಎಂದು ಹೇಳಲಾಗಿದೆ.
ತೀವ್ರ ಆಹಾರ ಅಭದ್ರತೆ ಅನುಭವಿಸುತ್ತಿರುವ ಕುಟುಂಬಗಳಿಗೆ, ಇದುವರೆಗೆ ಯಾವುದೇ ಪಡಿತರೆ ಚೀಟಿ ಹೊಂದಿರದ ಕುಟುಂಬಗಳಿಗೆ, ಕಾಡಿನಲ್ಲಿ ವಾಸವಿರುವ ಕುಟುಂಬಗಳಿಗೆ, ಅಲೆಮಾರಿ ಕುಟುಂಬಗಳಿಗೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಟುಂಬಗಳಿಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ.