ಕೊರೊನಾ ಕಾರಣಕ್ಕಾಗಿ ಕಳೆದ ಮೂರು ವರ್ಷಗಳಿಂದಲೂ ಶಬರಿಮಲೆಗೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು. ಆದರೆ ಈಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ಕೇಂದ್ರ ಸೇರಿದಂತೆ ಬಹುತೇಕ ಎಲ್ಲ ರಾಜ್ಯಗಳು ಕೊರೊನಾ ನಿರ್ಬಂಧಗಳಲ್ಲಿ ಸಡಿಲಿಕೆ ಮಾಡಿವೆ.
ಇದೀಗ ಈ ಬಾರಿ ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತೆರಳುತ್ತಿದ್ದಾರೆ. ಇದರ ಮಧ್ಯೆ ಕೇರಳ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಕೊರೊನಾ ನಿರ್ಬಂಧಗಳನ್ನು ಪೂರ್ಣ ಪ್ರಮಾಣದಲ್ಲಿ ಸಡಿಲಿಕೆ ಮಾಡಿದೆ.
ಈ ಬಾರಿ ಶಬರಿಮಲೆ ಯಾತ್ರೆಯನ್ನು ಅದ್ದೂರಿಯಾಗಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದ್ದು, ಹೀಗಾಗಿ ಶಬರಿಮಲೆಗೆ ಬರುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗುವಂತೆ ಮಾರ್ಗ ಮಧ್ಯ ತಂಗಲು ವ್ಯವಸ್ಥೆ, ಆರೋಗ್ಯ ತಪಾಸಣೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ.