ಚೆನ್ನೈ: ತಮಿಳುನಾಡಿನಾದ್ಯಂತ ಇರುವ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ.
ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದು ಎಂದು ನ್ಯಾಯಾಲಯ ಹೇಳಿದೆ.
ಜನರಿಗೆ ತೊಂದರೆಯಾಗದಂತೆ ದೇವಸ್ಥಾನಗಳಲ್ಲಿ ಫೋನ್ ಠೇವಣಿ ಲಾಕರ್ ಗಳನ್ನು ಸ್ಥಾಪಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಈ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿಯನ್ನು ಸಹ ನೇಮಿಸಲಾಗುವುದು.
ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ.
ಮೊಬೈಲ್ ಫೋನ್‌ಗಳು ಜನರ ಗಮನವನ್ನು ಬೇರೆಡೆ ಸೆಳೆಯುತ್ತವೆ ಮತ್ತು ದೇವತೆಗಳ ಚಿತ್ರಗಳನ್ನು ಕ್ಲಿಕ್ಕಿಸುವುದು ಆಗಮ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಜೊತೆಗೆ ಮಹಿಳೆಯರು ತಮ್ಮ ಒಪ್ಪಿಗೆಯಿಲ್ಲದೆ ತಮ್ಮ ಚಿತ್ರಗಳನ್ನು ಕ್ಲಿಕ್ ಮಾಡುವುದರಿಂದ ಭಯಪಡುತ್ತಾರೆ. ಛಾಯಾಗ್ರಹಣವು ದೇವಾಲಯಗಳ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ. ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ತಮಿಳುನಾಡಿನಾದ್ಯಂತ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆ ಬ್ಯಾನ್ ಮಾಡಿದೆ.