ಪಶ್ಚಿಮ ಬಂಗಾಳದ ತೃಣ ಮೂಲ ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಚ್ಚಾ ಬಾಂಬ್ ಸ್ಪೋಟ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿ ನಗರ ಪ್ರದೇಶದಲ್ಲಿ ಟಿಎಂಸಿ ಬೂತ್ ಅಧ್ಯಕ್ಷ ರಾಜಕುಮಾರ್ ಮನ್ನಾ ಎಂಬವನ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಪೋಟದ ಪರಿಣಾಮ ರಾಜಕುಮಾರ್ ಮನ್ನಾ ಸೇರಿದಂತೆ ಒಟ್ಟು ಮೂವರು ಮೃತಪಟ್ಟಿದ್ದಾರೆ.
ಟಿಎಂಸಿ ಮುಖಂಡನ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಕೆ ವೇಳೆ ಈ ಸ್ಫೋಟ ಸಂಭವಿಸಿದೆ ಎಂದು ಬಿಜೆಪಿ ಆರೋಪಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.