ಕಳೆದ ಕೆಲವು ದಿನಗಳಿಂದ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಒಟ್ಟಾಗಿಯೇ ಕಾಣಿಸಿಕೊಳ್ಳುತ್ತಿದ್ದು, ಇವರಿಬ್ಬರು ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಇತ್ತೀಚೆಗಷ್ಟೇ ಇವರುಗಳು ಒಟ್ಟಾಗಿಯೇ ದುಬೈ ಪ್ರವಾಸವನ್ನು ಮುಗಿಸಿಕೊಂಡು ಹಿಂದಿರುಗಿದ್ದರು.
ಇದೀಗ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ ಎನ್ನಲಾಗಿದ್ದು, ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ಡಾಲರ್ಸ್ ಕಾಲೋನಿಯಲ್ಲಿರುವ ಹರಿಪ್ರಿಯಾ ನಿವಾಸದಲ್ಲಿ ಸಂಬಂಧಿಕರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನೆರವೇರಿದೆ ಎಂದು ಹೇಳಲಾಗಿದೆ.
ಈ ವಿಚಾರವನ್ನು ನಟಿ ಹರಿಪ್ರಿಯ ವಿಶಿಷ್ಟ ರೀತಿಯಲ್ಲಿ ಬಹಿರಂಗಪಡಿಸಿದ್ದು ‘ಚಿನ್ನ ನಿನ್ನ ತೋಳಿನಲ್ಲಿ ಕಂದ ನಾನು’ ಎಂಬ ಶೀರ್ಷಿಕೆಯೊಂದಿಗೆ ಸಿಂಹದ ಮಡಿಲಲ್ಲಿ ಮಲಗಿರುವ ಪುಟ್ಟ ಮಗುವೊಂದರ ಚಿತ್ರವನ್ನು ಹಾಕಿದ್ದಾರೆ. ಮೂಲಗಳ ಪ್ರಕಾರ ಇವರುಗಳು ಮುಂದಿನ ವರ್ಷದ ಆರಂಭದಲ್ಲಿ ವೈವಾಹಿಕ ಬದುಕಿಗೆ ಕಾಲಿಡಲಿದ್ದಾರೆ ಎಂದು ತಿಳಿದುಬಂದಿದೆ.