ಡಿಸೆಂಬರ್ 18ರ ನಂತರ ಅನೇಕ ಹಾಲಿ, ಮಾಜಿ ಶಾಸಕರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 18ರ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗಲಿದೆ. ಹಲವು ಹಾಲಿ ಮತ್ತು ಮಾಜಿ ಶಾಸಕರು ಜೆಡಿಎಸ್ ಗೆ ಸೇರಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್, ಬಿಜೆಪಿ ಯವರು ರೌಡಿಶೀಟರ್ ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಾರೆ. ನಮ್ಮಲ್ಲಿ ಅದಕ್ಕೆ ಅವಕಾಶವಿಲ್ಲ. ಅಂಥವರು ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.