ಬೆಳಗಾವಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಕ್ಟೀವ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದಾರೆ.
ಆಖಾಡ ತಯಾರಾಗಿದೆ. ನಾವು ತಯಾರಿದ್ದೇವೆ, ನೀವು ಧುಮುಕಿ. ಚುನಾವಣೆ ಗೆದ್ದ ಮರುದಿನದಿಂದಲೇ ನಾನು ತಯಾರಿ ನಡೆಸಿದ್ದೇನೆ. ಚುನಾವಣೆಗೆ 90 ದಿನ ಇದೆ ಎಂದು ನಾನು ತಯಾರಿ ನಡೆಸಿಲ್ಲ ಎಂದು ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪರಾಭವಗೊಳಿಸಲು ರಮೇಶ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅಖಾಡ ತಯಾರಿದೆ, ನಾವೂ ತಯಾರಾಗಿದ್ದೇವೆ ಎಂದು ಟಾಂಗ್ ಕೊಟ್ಟಿದ್ದಾರೆ.