ಸರ್ಕಾರಿ ವೈದ್ಯೆಯೊಬ್ಬರು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕುಷ್ಠರೋಗ ನಿವಾರಣಾ ಅಧಿಕಾರಿಯಾಗಿದ್ದ ಡಾ. ರೂಪಾ ಸಾವನ್ನಪ್ಪಿದವರಾಗಿದ್ದಾರೆ.
ಇವರು ಸೋಮವಾರ ಬೆಳಿಗ್ಗೆ ತಮ್ಮ ಮನೆಯಲ್ಲಿಯೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಅದಕ್ಕೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಹೇಳಲಾಗಿದೆ.
ಖ್ಯಾತ ಮೂಳೆ ತಜ್ಞ ಡಾ. ರವಿ ಅವರ ಪತ್ನಿ ಆಗಿರುವ ರೂಪಾ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.