ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸುಳಿವು ನೀಡಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಶಿರಸಿ ಜಿಲ್ಲೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದ ಕಾರ್ಮಿಕರ ರಾಜ್ಯ ವಿಮಾ ಚಿಕಿತ್ಸಾಲಯ ಉದ್ಘಾಟನಾ ಸಮಾರಂಭದಲ್ಲಿ ಸ್ಪೀಕರ್ ಕಾಗೇರಿ ಈ ಬಗ್ಗೆ ಸುಳಿವು ನೀಡಿದ್ದಾರೆ.
ಸಚಿವ ಹೆಬ್ಬಾರ್ ಅವರ ಎದುರಲ್ಲೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ ನೀಡಿದ್ದಾರೆ. ಶಿರಸಿ ಪ್ರತ್ಯೇಕ ಜಿಲ್ಲೆ ಘೋಷಣೆಗಾಗಿ ಜನರಿಂದ ಒತ್ತಡ ಹೆಚ್ಚಾಗುತ್ತಿದೆ. ವಿಜಯನಗರ, ಕೊಪ್ಪಳ, ಹಾವೇರಿ ಪ್ರತ್ಯೇಕ ಜಿಲ್ಲೆಗಳಾಗಿ ಘೋಷಣೆ ಮಾಡಲಾಗಿದೆ. ಶಿರಸಿ ಪ್ರತ್ಯೇಕ ಜಿಲ್ಲೆ ಆಗುವುದು ಯಾವಾಗ ಎಂದು ಜನ ಪ್ರಶ್ನಿಸುತ್ತಾರೆ. ಭೌಗೋಳಿಕವಾಗಿ ಉತ್ತರ ಕನ್ನಡ ಜಿಲ್ಲೆ ಬಹಳ ವಿಸ್ತಾರವಾಗಿದೆ. ಹಾಗಾಗಿ, ಶಿರಸಿ ಪ್ರತ್ಯೇಕ ಜಿಲ್ಲೆ ಮಾಡುವುದು ಅನಿವಾರ್ಯವಾಗಿದೆ ಎಂದರು.
ಶಿರಸಿ ಪ್ರತ್ಯೇಕ ಜಿಲ್ಲೆಯ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಚರ್ಚೆ ನಡೆಸಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡುವ ಸಾಧ್ಯತೆ ಇದೆ. ಬೆಟ್ಟದ ಮೇಲಿನ ಜನತೆ ಸಹಕರಿಸಬೇಕು ಎಂದು ಸ್ಪೀಕರ್ ಕಾಗೇರಿ ಮನವಿ ಮಾಡಿದರು.
ಈಗಾಗಲೇ ಪ್ರತ್ಯೇಕ ಶೈಕ್ಷಣಿಕ ಜಿಲ್ಲೆಯಾಗಿರುವ ಶಿರಸಿ ಆಡಳಿತಾತ್ಮಕವಾಗಿ ನೂತನ ಜಿಲ್ಲೆಯಾಗಲಿದೆ ಎಂದು ಹೇಳಲಾಗಿದೆ.