alex Certify 10 ನೇ ತರಗತಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10 ನೇ ತರಗತಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದೆ.

ಡಿಸೆಂಬರ್ 13 ರಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಡಿಸೆಂಬರ್ 16 ರಂದು ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಾಗೂ ಡಿಸೆಂಬರ್, 20 ರಂದು ಗೋಣಿಕೊಪ್ಪ ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯಾಯ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಉದ್ಯೋಗ ಮೇಳ ನಡೆಯಲಿದೆ.

ಜಸ್ಟ್ ಡಯಲ್, ಪ್ರೇರಣಾ ಮೋಟಾರ್ಸ್ ಪ್ರೈ.ಲಿ., ಟ್ರಿಡೆಂಟ್ ಅಟೋ ಮೊಬೈಲ್ ಪ್ರೈ ಲಿ., ನೆಟ್ಟೂರು ಟೆಕ್ನಿಕಲ್ ಟ್ರೈನಿಂಗ್ ಫೌಂಡೇಶನ್, ಮದರ್‍ಸನ್ ಬೆಂಗಳೂರು, ಹೊಂಡಾ ಸನ್ ಬ್ರೈಟ್, ದಿ ನುಡ್ಗೆ ಫೌಂಡೇಶನ್, ಅಮನ್‍ವನ ರೆಸಾರ್ಟ್, ವೀರ ಭೂಮಿ ರೆಸಾರ್ಟ್, ಪೂಜ್ಯಿಟೆಕ್ ಪ್ರೈ.ಲಿ. ಮತ್ತು ಸ್ವರ್ಣ ಭೂಮಿ ರೆಸಾರ್ಟ್ ಮೊದಲಾದ 30 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.

10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. 300 ಕ್ಕಿಂತ ಹೆಚ್ಚು ಉದ್ಯೋಗಗಳಿಗೆ ನೇಮಕಾತಿ ನಡೆಯಲಿದೆ.

ಉದ್ಯೋಗಾಕಾಂಕ್ಷಿಗಳು https://forms.gle/ErcWUnGyps4SvJRr7  ಗೂಗಲ್ ಲಿಂಕ್/ಅಥವಾ ಕೋಡ್ ಮೂಲಕ ನೋಂದಾಯಿಸಿಕೊಂಡು ತಮ್ಮ ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ವೈಯಕ್ತಿಕ ವಿವರಗಳ(ಬಯೋ ಡಾಟಾ) ಕನಿಷ್ಟ 10 ಪ್ರತಿಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗುವುದು. ಅಲ್ಲದೇ ಉದ್ಯೋಗ ಮೇಳ ನಡೆಯುವ ಕೇಂದ್ರದಲ್ಲಿಯೂ ಅಭ್ಯರ್ಥಿಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗದಾತರು ಸಹ ತಮ್ಮಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ವಿವರಗಳನ್ನು ಈ ಕಚೇರಿಯ ಇ-ಮೇಲ್ ವಿಳಾಸಕ್ಕೆ dsdokodagu2020@gmail.com ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಡಗು ಜಿಲ್ಲೆ, ಇವರನ್ನು ಕಚೇರಿ ವೇಳೆಯಲ್ಲಿ ಹಾಗೂ ದೂ.ಸಂ.08272-225851/ 9738361502/ 8123312319/ 8296020826 ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...