ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನೊಂದಿಗೆ ಹೊಸ ದಾಖಲೆ ಬರೆದಿದೆ. ಸತತ 7ನೇ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ.
ಗುಜರಾತ್ ನಲ್ಲಿ ಬಿಜೆಪಿ 154 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಐತಿಹಾಸಿಕ ದಾಖಲೆ ಬರೆದಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ಗುಜರಾತ್ ನಲ್ಲಿ ಕಾಂಗ್ರೆಸ್ ಪಡೆದುಕೊಂಡಿದ್ದ ಅನುಕಂಪದ ಮತಗಳ ದಾಖಲೆಯನ್ನು ಈ ಬಾರಿ ಬಿಜೆಪಿ ಮುರಿದಿದೆ.
ಗುಜರಾತ್ ನಲ್ಲಿ 1985ರಲ್ಲಿ ಕಾಂಗ್ರೆಸ್ ಅತಿ ಹೆಚ್ಚು 149 ಸೀಟ್ ಗಳನ್ನು ಗೆದ್ದು ಬೀಗಿತ್ತು. ಇದೀಗ ಬಿಜೆಪಿ 154 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.
ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 6 ಗಂಟೆಗೆ ಗುಜರಾತ್ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.
ಸಧ್ಯದ ಮಾಹಿತಿ ಪ್ರಕಾರ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, 6 ಕ್ಷೇತ್ರಗಳಲ್ಲಿ ಆಪ್ ಹಾಗೂ 4 ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳು ಮುನ್ನಡೆಯಲಿದ್ದಾರೆ.