alex Certify ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಲ್ಲ: ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಲ್ಲ: ಹೆಚ್.ಡಿ. ಕುಮಾರಸ್ವಾಮಿ

ಹುಬ್ಬಳ್ಳಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹುಬ್ಬಳ್ಳಿ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಸದನದಲ್ಲಿ ನಾನು ಭಾಗವಹಿಸುವುದಿಲ್ಲ. ಸದನದಲ್ಲಿ ಬಂಡೆಪ್ಪ ಕಾಶೆಂಪೂರ್ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ ಎಂದರು.

ಬಿಜೆಪಿ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಕೇವಲ ದೊಡ್ಡದಾಗಿ ಘೋಷಣೆ ಮಾಡುವುದೇ ಬಿಜೆಪಿ ಕೆಲಸವಾಗಿದೆ. ಕರ್ನಾಟಕ, ಮಹಾರಾಷ್ಟ್ರ ಬಿಜೆಪಿ ನಾಯಕರಿಂದ ವಿಷಯ ಡೈವರ್ಟ್ ಮಾಡಲಾಗುತ್ತಿದೆ ಎಂದು ಗಡಿ ವಿವಾದ ಕುರಿತು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.

ಗಡಿ ವಿವಾದ ಮುಗಿದು ಹೋದ ಅಧ್ಯಾಯ. ಬಿಜೆಪಿಯವರಿಗೆ ಅಭಿವೃದ್ಧಿ ವಿಷಯವಿಲ್ಲ, ಹೀಗಾಗಿ ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ಗುಜರಾತ್ ಮಾದರಿ ಕರ್ನಾಟಕದಲ್ಲಿ ವರ್ಕೌಟ್ ಆಗಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...