ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಶಿವಮೊಗ್ಗ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಸರ್ವರಿಗೂ ಉದ್ಯೋಗ ಎಂಬ ಶೀರ್ಷಿಕೆ ಅಡಿಯಲ್ಲಿ ಡಿ. 13 ರ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆವರೆಗೆ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಸುಮಾರು 30 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. 7ನೇ ತರಗತಿ, ಎಸ್‍ಎಸ್‍ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಯಾವುದೇ ಸ್ನಾತಕೋತ್ತರ ಪದವಿ ಮುಗಿಸಿದ ಶಿವಮೊಗ್ಗ, ಬೆಂಗಳೂರು ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಕೆಲಸ ಮಾಡಲು ಆಸಕ್ತಿಯುಳ್ಳ ಉದ್ಯೋಗಾಕಾಂಕ್ಷಿಗಳು http://skillconnect.kaushalkar.com/candidatereg ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು ಬರುವಾಗ ಕನಿಷ್ಟ 10 ಸ್ವ-ವಿವರ ಪ್ರತಿಗಳನ್ನು ಹಾಗೂ ಇತ್ತೀಚಿನ ಭಾವಚಿತ್ರಗಳನ್ನು ತರುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.08182 –255294, ಮೊ.ಸಂ.: 8197176710, 9019485688 ನ್ನುಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿರುತ್ತಾರೆ.