ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾದ ಪರಿಣಾಮ ಕೋಚಿಂಗ್ ಸೆಂಟರ್ ನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ಮುಂಬೈ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಘಟನೆ ವಿವರ: ಮುಂಬೈನ ಚೆಂಬೂರ್ ನಲ್ಲಿರುವ ಕೋಚಿಂಗ್ ಸೆಂಟರ್ ನ 48 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರು ಪ್ರವಾಸಕ್ಕೆ ತೆರಳಿದ್ದು, ವಾಪಸ್ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮುಂಬೈ – ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ರಾಯಗಢ ಜಿಲ್ಲೆಯ ಖೋಪೋಲಿ ಬಳಿ ಬಸ್ ಪಲ್ಟಿಯಾಗಿದೆ. ಇದರಿಂದಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.