ಕಲ್ಯಾಣ ಕರ್ನಾಟಕದ ಜನತೆಗೆ ಸಾರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್ ನೀಡಿದ್ದಾರೆ. ಈ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಗಳನ್ನು ಖರೀದಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸೋಮವಾರದಂದು ರಾಯಚೂರು ಜಿಲ್ಲೆ, ಲಿಂಗಸುಗೂರು ಪಟ್ಟಣದ ನೂತನ ಬಸ್ ನಿಲ್ದಾಣ ಹಾಗೂ ಸಿಬ್ಬಂದಿ ವಸತಿಗೃಹಗಳನ್ನು ಉದ್ಘಾಟಿಸುವ ವೇಳೆ ಅವರು ಈ ವಿಷಯ ತಿಳಿಸಿದ್ದಾರೆ.
ಅಲ್ಲದೆ 2030ರೊಳಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ 40,000 ಬಸ್ ಗಳಿಗೂ ಎಸಿ ಕಲ್ಪಿಸುವ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.