alex Certify ಹೃದಯಾಘಾತದಿಂದ ಕುಸಿದು ಬಿದ್ದು ವೇಯ್ಟ್ ಲಿಫ್ಟರ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯಾಘಾತದಿಂದ ಕುಸಿದು ಬಿದ್ದು ವೇಯ್ಟ್ ಲಿಫ್ಟರ್ ಸಾವು

ಹೃದಯಾಘಾತದಿಂದ ಮನೆಯಲ್ಲಿಯೇ ಕುಸಿದು ಬಿದ್ದು ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟರ್ ರಾಜೇಂದ್ರ ಪ್ರಸಾದ್ ಅವರು ವಿಧಿವಶರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 39 ವರ್ಷದ ರಾಜೇಂದ್ರ ಪ್ರಸಾದ್ ಮೂಡುಬಿದರೆ ಆಳ್ವಾಸ್ ಕಾಲೇಜಿನಲ್ಲಿ ವೇಯ್ಟ್ ಲಿಫ್ಟಿಂಗ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದು, ಸೋಮವಾರದಂದು ಪುತ್ತೂರಿನ ಪಡೀಲ್ ನಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ರಾಜೇಂದ್ರ ಪ್ರಸಾದ್ ಅಗಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...