ಬೆಂಗಳೂರು: ಕಳ್ಳತನಕ್ಕೆ ಬಂದಿದ್ದ ಕಳ್ಳನ ಮೇಲೆ ಮನೆ ಮಾಲೀಕ ಗುಂಡು ಹಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಇಂದು ಬೆಳಗಿನ ಜಾವ 2:30ರ ಸುಮಾರಿಗೆ ಈ ಘಟನೆ ನಡೆದಿದೆ. ಮನೆ ಮಾಲೀಕ ಕಳ್ಳನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಕಳ್ಳ ಗುಂಡೇಟಿನಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟೆ ಮೂಲದ ಲಕ್ಷ್ಮಣ ಗುಂಡೇಟು ತಗುಲಿ ಗಾಯಗೊಂಡಿರುವ ಆರೋಪಿ. ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.