ಕಾರವಾರ: ಜನವರಿ 2ನೇ ವಾರ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಅರವಿಂದ ಕೇಜ್ರಿವಾಲ್ ಭೇಟಿಯ ನಂತರ 224 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕಾಂಗ್ರೆಸ್ ನಶಿಸಿದೆ, ಜೆಡಿಎಸ್ ಕೆಲವೇ ಸೀಟುಗಳನ್ನು ಗೆಲ್ಲಲು ಹವಣಿಸುತ್ತಿದೆ. ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿ ಮಾತ್ರ ನೇರ ಎದುರಾಳಿಯಾಗಿದೆ. ಆಮ್ ಆದ್ಮಿ ಪರವಾದ ಅಲೆ ಗುಪ್ತಗಾಮಿನಿಯಾಗಿದ್ದು, ಚುನಾವಣೆ ವೇಳೆ ಅಪ್ಪಳಿಸಲಿದೆ. ರಾಜ್ಯದಲ್ಲಿ ಚುನಾವಣೆ ವೇಳೆ ಪ್ರಣಾಳಿಕೆ ಬದಲು ಗ್ಯಾರಂಟಿ ಕಾರ್ಡ್ ನೀಡಿ ಆಮ್ ಆದ್ಮಿ ಪಕ್ಷ ಮತಯಾಚಿಸಲಿದೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದಿದ್ದೇನೆ, ನಾನು ಸ್ಪರ್ಧಿಸುವುದಿಲ್ಲ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.