alex Certify 1 ರಿಂದ 10 ನೇ ತರಗತಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ರಿಂದ 10 ನೇ ತರಗತಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ(1 ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸದಿರುವ ಮತ್ತು 2022-23ನೇ ಸಾಲಿನ ನವೀನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್  http://ssp.karnataka.gov.in     ಮತ್ತು  www.sw.kar.nic.in     ಹಾಗೂ  http://ssp.postmatric.karnataka.gov.in     ಲಿಂಕ್‌ನಡಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಆಯಾ ಶಾಲಾ/ಕಾಲೇಜು ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಕಾರ್ಯಾಲಯದ ದೂರವಾಣಿ ಸಂಖ್ಯೆ:9480843164ಗೆ ಸಂಪರ್ಕಿಸಬಹುದೆಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-1 ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...