ಬೆಂಗಳೂರು: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ನವ ದೆಹಲಿಯಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಮಹತ್ವದ ಸಭೆ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಭಾಗಿಯಾಗಲಿದ್ದಾರೆ, ಮಹಾರಾಷ್ಟ್ರ ಪದೇ ಪದೇ ಗಡಿ ವಿವಾದ ಕೆದಕುತ್ತಿದ್ದು ಇತ್ತೀಚೆಗೆ ಅಮಿತ್ ಶಾ ಅವರನ್ನು ಭೇಟಿಯಾಗಿದ್ದ ಮಹಾರಾಷ್ಟ್ರ ನಿಯೋಗ ಮನವಿ ಸಲ್ಲಿಸಿತ್ತು. ಭೇಟಿಯ ಸಂದರ್ಭದಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುವುದಾಗಿ ಅಮಿತ್ ಶಾ ಹೇಳಿದ್ದರು.
ಅಂತೆಯೇ ಇಂದು ಸಂಜೆ ದೆಹಲಿಯಲ್ಲಿ ಸಭೆ ನಿಗದಿಯಾಗಿದ್ದು, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ನಡುವೆ ದಶಕಗಳಿಂದ ಇರುವ ಗಡಿ ಬಿಕ್ಕಟ್ಟಿಗೆ ತೆರೆ ಎಳೆಯಲಾಗುವುದು ಎಂದು ಹೇಳಲಾಗಿದೆ.